76ನೇ ಗಣರಾಜ್ಯ ದಿನದ ಅಂಗವಾಗಿ ಎಸ್‌ಡಿಪಿಐ ಬೆಳ್ತಂಗಡಿ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ

ಬೆಳ್ತಂಗಡಿ:  76ನೇ ಗಣರಾಜ್ಯೋತ್ಸವ ದಿನದ ಅಂಗವಾಗಿ “ಪ್ರಜಾಪ್ರಭುತ್ವ ನೆಲೆಗೊಳ್ಳಲಿ, ಫ್ಯಾಸಿಸಂ ಕೊನೆಗೊಳ್ಳಲಿ’ ಎಂಬ ಘೋಷ ವಾಕ್ಯದೊಂದಿಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಬೆಳ್ತಂಗಡಿ ಪಕ್ಷದ ಕಛೇರಿ ಮುಂಭಾಗದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಧ್ವಜಾರೋಹಣವನ್ನು ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ನವಾಝ್ ಕಟ್ಟೆ ಸಂವಿಧಾನ ಪೀಠಿಕೆ ಓದಿ, ಸಂದೇಶ ಭಾಷಣ ಮಾಡಿದರು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಪದಾಧಿಕಾರಿಗಳು ಮತ್ತು ನಾಯಕರು ಉಪಸ್ಥಿತರಿದ್ದರು.

ಕ್ಷೇತ್ರ ಸಮಿತಿ ಸದಸ್ಯರಾದ ಸಹಲ್ ನಿರ್ಸಾಲ್ ಕಾರ್ಯಕ್ರಮ ನಿರೂಪಿಸಿ, ಧನ್ಯವಾದಗೈದರು.

Leave a Reply