ನವದೆಹಲಿ: ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅವರ ಮಗ ಅಭಿಷೇಕ್ ಬಚ್ಚನ್ ಹಾಗೂ ಸೊಸೆ ಐಶ್ವರ್ಯ ರೈ ಸಂಬಂಧದಲ್ಲಿ ಬಿರುಕು ಮತ್ತಿತರ ವದಂತಿಗಳು ಆಗಾಗ್ಗೆ ಮಾಧ್ಯಮಗಳಲ್ಲಿ ಹರಿದಾಡುತ್ತಿರುತ್ತವೆ. ಈಗ ಬಿಗ್ ಬಿ ಮೊಮ್ಮಗಳು ಆರಾಧ್ಯ ಬಚ್ಚನ್ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ತಮ್ಮ ಆರೋಗ್ಯದ ಬಗ್ಗೆ ಇಲ್ಲ ಸಲ್ಲದ ಸುಳ್ಳು ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರುವಂತೆ ಕೋರಿ ದೆಹಲಿ ಹೈಕೋರ್ಟ್ ಗೆ ಮತ್ತೊಮ್ಮೆ ಅರ್ಜಿ ಸಲ್ಲಿಸಿದ್ದಾರೆ.
ನನ್ನ ಆರೋಗ್ಯ ಕುರಿತು ಹಲವು ವೆಬ್ ಸೈಟ್ ಹಾಗೂ ಯೂ ಟ್ಯೂಬ್ ಗಳಲ್ಲಿ ಸುಳ್ಳು ಸುದ್ದಿ ಪ್ರಸಾರ ಮಾಡುವ ಮೂಲಕ ಜನರನ್ನು ತಪ್ಪು ದಾರಿಗೆಳೆಯುವ ಮಾಹಿತಿ ನೀಡಲಾಗುತ್ತಿದೆ. ಈಗಾಗಲೇ ಪ್ರಕಟವಾಗಿರುವ ಸುದ್ದಿಗಳನ್ನು ಕೂಡಲೇ ತೆಗೆದುಹಾಕಲು ನಿರ್ದೇಶನ ನೀಡಬೇಕು ಎಂದು ಆರಾಧ್ಯ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ಈ ಹಿಂದೆ 2023ರ ಏಪ್ರಿಲ್ 20 ರಂದು ಆರಾಧ್ಯ ಬಚ್ಚನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್, ಆಕೆಯ ಆರೋಗ್ಯ ಕುರಿತು ಸುಳ್ಳು ಸುದ್ದಿ ಪ್ರಸಾರ ಮಾಡದಂತೆ ಹಲವಾರು ಯೂಟ್ಯೂಬ್ ಚಾನೆಲ್ ಗಳಿಗೆ ನಿರ್ಬಂಧ ಹೇರಿತ್ತು. ಇಂತಹ ವಿಡಿಯೋಗಳನ್ನು ಯೂ ಟ್ಯೂಬ್ ನಿಂದ ತೆಗೆದುಹಾಕುವಂತೆ ಗೂಗಲ್ ಗೆ ಸೂಚನೆ ನೀಡಿತ್ತು.