ಮಂಗಳೂರು: ಅಪಘಾತದಲ್ಲಿ ಗಾಯಗೊಂಡಿದ್ದ ಕಂಕನಾಡಿ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಸಾವು

ಮಂಗಳೂರು: ನಗರದ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಕಾನ್‌ಸ್ಟೇಬಲ್ ಹರೀಶ್ ಅವರು ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಬುಧವಾರ ಸುಳ್ಯ ಬಳಿ ರಸ್ತೆ ಅಪಘಾತದಲ್ಲಿ ಹರೀಶ್ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಜೀವನ್ಮರಣ ಸ್ಥಿತಿಯಲ್ಲಿ ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು‌. ಆದರೆ ರವಿವಾರ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಹರೀಶ್ ಅವರು ಮೂಲತಃ ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕು ಗಾಯನ ಹಳ್ಳಿ ಗ್ರಾಮದ ನಿವಾಸಿಯಾಗಿದ್ದರು.

Leave a Reply