
ಬೆಳ್ತಂಗಡಿ: ಮೈಸೂರಿನ ಕಂಪೆನಿಯೊಂದರಲ್ಲಿ ಟೆಕ್ನಿಕಲ್ ಆಫೀಸರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ನವ ವಿವಾಹಿತ ಕಿರಣ್ (35) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ.



ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾ. ಪಂ ವ್ಯಾಪ್ತಿಯ ನಾಲ್ಕೂರು ಗ್ರಾಮದ ಮಜಲಡ್ಡ ನಿವಾಸಿಯಾಗಿರುವ ಕರಿಯ ಪೂಜಾರಿಯವರ ಪುತ್ರ ಕಿರಣ್ ಅವರು ಕಳೆದ 12 ವರ್ಷಗಳಿಂದ ಮೈಸೂರಿನ ಖಾಸಗಿ ಕಂಪನಿಯೊಂದರಲ್ಲಿ ಟೆಕ್ನಿಕಲ್ ಆಫೀಸರ್ ಕೆಲಸ ನಿರ್ವಹಿಸುತ್ತಿದ್ದರು. ಉತ್ತಮ ಸಂಬಳವು ಇತ್ತು, ಕಳೆದ ಮೂರೂವರೆ ತಿಂಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.
ಮೃತರು ತಂದೆ, ತಾಯಿ, ಪತ್ನಿ, ಓರ್ವ ಸಹೋದರ, ಸಹೋದರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ.ಈ ಸಂಬಂಧ ಮೈಸೂರು ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.