
ತುಂಗಾ ನದಿಯಲ್ಲಿ ಮೂವರು ಅಪರಿಚಿತರ ಮೃತದೇಹ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಮೃತದೇಹದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



ಶಿವಮೊಗ್ಗದ ತುಂಗಾ ನದಿಯಲ್ಲಿ ಮೂವರ ಮೃತದೇಹಗಳು ಪತ್ತೆಯಾಗಿರೋದಾಗಿ ತಿಳಿದು ಬಂದಿದೆ. ಇಬ್ಬರು ಪುರುಷರು ಹಾಗೂ ಓರ್ವ ಮಹಿಳೆಯ ಮೃತದೇಹ ಪತ್ತೆಯಾಗಿದೆ.
ಮೃತದೇಹವನ್ನು ಕಂಡಂತ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ತೆರಳಿದಂತ ಪೊಲೀಸರು ಪರಿಶೀಲಿಸಿದ್ದಾರೆ. ಈ ಸಂಬಂಧ ದೂರು ದಾಖಲಿಸಿಕೊಂಡು, ಅಪರಿಚಿತ ಮೃತದೇಹಗಳ ಬಗ್ಗೆ ತನಿಖೆ ಮುಂದುವರೆಸಿದ್ದಾರೆ.