ಪುತ್ತೂರು: ಆಟೋ ಚಾಲಕ ನೇಣು ಬಿಗಿದು ಆತ್ಮಹತ್ಯೆಗೆ ಶರಣು

ಪುತ್ತೂರು: ಆಟೋ ಚಾಲಕರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪೆರಿಯತ್ತೋಡಿ ಎಂಬಲ್ಲಿ ನಡೆದಿದೆ.

ಪೆರಿಯತ್ತೋಡಿ ನಿವಾಸಿ ಕೃಷ್ಣ (40) ಆತ್ಮಹತ್ಯೆ ಮಾಡಿಕೊಂಡ ಆಟೋ ಚಾಲಕ. ಬೆಳಿಗ್ಗೆ ಆಟೋದಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ದಿದ್ದರು. ಮಧ್ಯಾಹ್ನದ ವೇಳೆ ಅವರಿಗೆ ಸಾಲ ವಸೂಲಿಗಾರರ ಕರೆ ಬಂದಿತ್ತು. ಅದಾದ ಬಳಿಕ ಅವರು ಮನೆಯ ಬಳಿಯ ಮರವೊಂದರ ಕೊಂಬೆಗೆ ನೇ‌ಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply