ಬಂಟ್ವಾಳ: ಕಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡಿನ ಸರ್ಕಲ್ ಬಳಿ ನಡೆದಿದೆ. ಬಂಟ್ವಾಳ ಕನ್ಯಾನದ ವಿಷ್ಣು ಗ್ಯಾರೇಜ್ ಮಾಲಕ ವಿಶ್ವನಾಥ ಶೆಟ್ಟಿ ಗಾಯಗೊಂಡ ಕಾರು ಚಾಲಕ ಎಂದು ಗುರುತಿಸಲಾಗಿದೆ.ಬಿಸಿರೋಡಿನ ಕಡೆಯಿಂದ ಮೆಲ್ಕಾರ್ ಕಡೆಗೆ ಕಾಂಕ್ರೀಟ್ ರಸ್ತೆಯಲ್ಲಿ ಹೋಗುತ್ತಿದ್ದ ವಿಶ್ವನಾಥ ಅವರ ಕಾರಿಗೆ ಮೆಲ್ಕಾರ್ ಪಾಣೆಮಂಗಳೂರು ಕಡೆಯಿಂದ ಬರುತ್ತಿದ್ದ ಸೆಲಿನಾ ಬಸ್ ವಿರುದ್ಧ ದಿಕ್ಕಿನಲ್ಲಿ ಬಂದು ಡಿಕ್ಕಿ ಹೊಡೆದಿದೆ.ಬಸ್ ಚಾಲಕನ ನಿಯಮ ಮೀರಿದ ಚಾಲನೆಯೇ ಘಟನೆಗೆ ಕಾರಣವಾಗಿದೆ ಎಂದು ಹೇಳಲಾಗಿದೆ.ಬಿಸಿರೋಡಿನಿಂದ ಮೆಲ್ಕಾರ್ ಕಡೆಗೆ ಹೋಗುವ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ತಿಳಿಸಿದ್ದಾರೆ.ಘಟನೆಯಿಂದ ಕಾರು ಸಂಪೂರ್ಣ ಜಖಂಗೊಂಡಿದ್ದು ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪುತ್ತೂರು: ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಮನೆಗೆ ಪೊಲೀಸರು ದಾಳಿ ನಡೆಸಿದ ಘಟನೆ ಇಲ್ಲಿನ ಸಾಮೆತ್ತಡ್ಕದಲ್ಲಿ ನಡೆದಿದೆ. ದಾಳಿ ವೇಳೆ ಯುವತಿ ಮತ್ತು ಪುರುಷನನ್ನು ಅಲ್ಲಿಂದ ತಪ್ಪಿಸಲು ಮನೆ…
ಸುಳ್ಯ ಸಮೀಪದ ಎಲಿಮಲೆ ಸರಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಶಮಂತ್ ಎಂಬಾತ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಚೊಕ್ಕಾಡಿ ಸಮೀಪದ ಕೆಮ್ರಾಜೆ ಗ್ರಾಮದ ಹೊಟ್ಟುಚೋಡಿಯಲ್ಲಿ…
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಆಸ್ಪತ್ರೆಯೊಂದರಲ್ಲಿ ನೋಂದಣಿ ಮಾಡದೆ ಇರುವ ಅಕ್ರಮ ಸ್ಕ್ಯಾನಿಂಗ್ ಯಂತ್ರವನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿರುವ ಘಟನೆ ನಡೆದಿದೆ. ದಕ್ಷಿಣ…