ವಕ್ಫ್ ಆಸ್ತಿ, ಮುಸ್ಲಿಂ ಸ್ಮಾಶನಗಳ ರಕ್ಷಣೆಗೆ 150 ಕೋಟಿ ರೂ: ಸಿದ್ದರಾಮಯ್ಯ ಘೋಷಣೆ

ವಕ್ಫ್ ಆಸ್ತಿಗಳ ದುರಸ್ತಿ ಮತ್ತು ನವೀಕರಣ, ಮುಸ್ಲಿಂ ಸ್ಮಶಾನಗಳ ರಕ್ಷಣೆಗಾಗಿ ಮೂಲಸೌಕರ್ಯ ಒದಗಿಸಲು 150 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಬಜೆಟ್​​ನಲ್ಲಿ (Karnataka Budget 2025) ಘೋಷಣೆ ಮಾಡಿದರು.

ದೇಶದಾದ್ಯಂತ ವಕ್ಫ್ ಆಸ್ತಿ ವಿಚಾರ ಚರ್ಚೆಯಲ್ಲಿರುವ ಮತ್ತು ರಾಜ್ಯದಲ್ಲಿ ಅನೇಕ ರೈತರ ಜಮೀನಿಗೆ ಸಂಬಂಧಿಸಿ ವಕ್ಫ್ ಆಸ್ತಿ ಎಂಬ ನೋಟಿಸ್ ಬಂದಿರುವ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿರುವ ಸಂದರ್ಭದಲ್ಲೇ ಸಿದ್ದರಾಮಯ್ಯ ಬಜೆಟ್​​ನಲ್ಲಿ ಮಹತ್ವದ ಘೋಷಣೆ ಮಾಡಿದ್ದಾರೆ.

Leave a Reply