ಉಡುಪಿ: ಕಾಲೇಜು ವಿದ್ಯಾರ್ಥಿನಿ ಮೃತ್ಯು..!

ಉಡುಪಿ ತಾಲೂಕಿನ ಪೆರ್ಡೂರು ಗ್ರಾಮದ ಹತ್ತಬೈಲು ದರ್ಖಾಸಿನ ಲತಾ ಮೊಗವೀರ ಅವರ ಪುತ್ರಿ ರಕ್ಷಿತಾ (21) ಅನಾರೋಗ್ಯದಿಂದ ಸೋಮವಾರ ನಿಧನ ಹೊಂದಿದರು.

ಮಣಿಪಾಲ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಅವರು ಹಿರಿಯಡಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ಕಲಾ ವಿಭಾಗದಲ್ಲಿ ಓದುತ್ತಿದ್ದರು. ಪೆರಂಪಳ್ಳಿಯಲ್ಲಿ ಎನ್.ಎಸ್.ಎಸ್.ಕ್ಯಾಂಪ್‌ ನಲ್ಲಿ ಭಾಗವಹಿಸಿದ್ದ ವೇಳೆ ತೀವ್ರ ರಕ್ತಸ್ರಾವದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು.

Leave a Reply