
ಉಡುಪಿ: ಪ್ರಚೋದನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಶರಣ್ ಪಂಪವೆಲ್ ವಿರುದ್ಧ ಉಡುಪಿ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಕರಣ ಸಾರಾಂಶ : ದಿನಾಂಕ 03/07/2025 ರಂದು ಭರತೇಶ್ ಕಂಕಣವಾಡಿ, ಪೊಲೀಸ್ ಉಪನಿರೀಕ್ಷಕರು (ಕಾ ಮತ್ತು ಸು), ಉಡುಪಿ ನಗರ ಪೊಲೀಸ್ ಠಾಣೆ ಇವರು ಸೋಷಿಯಲ್ ಮೀಡಿಯಾವನ್ನು ವೀಕ್ಷಿಸುತ್ತಿದ್ದಾಗ ವಾಟ್ಸಾಪ್ ಮುಖಾಂತರ ವಿಡಿಯೋ ಬಂದಿದ್ದು, ವಿಡಿಯೋದಲ್ಲಿ ಶರಣ್ ಪಂಪವೆಲ್ ಟೈಮ್ಸ್ ಚಾನೆಲ್ ನಲ್ಲಿ ಮಾಧ್ಯಮದೊಂದಿಗೆ ಮಾತನಾಡುತ್ತಾ ಕುಂಜಾಲುವಿನಲ್ಲಿ ನಡೆದ ಗೋ ಹತ್ಯೆ ಯನ್ನು ಉದ್ದೇಶಿಸಿ ಸಾರ್ವಜನಿಕವಾಗಿ ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಾಕಾರಿ ಹೇಳಿಕೆ ನೀಡಿದ್ದು, ಆರೋಪಿ ಶರಣ್ ಪಂಪ್ ವೆಲ್ ನೀಡಿದ ವಿಡಿಯೋ ವಿವಿಧ ವಾಟ್ಸಪ್ ಗ್ರೂಪ್ ಗಳಿಗೆ ಹರಿಬಿಟ್ಟಿದ್ದು, ಸಾರ್ವಜನಿಕ ಶಾಂತಿ-ಸುವ್ಯವಸ್ಥೆಗೆ ಭಂಗ ತರುವಂತೆ ಪತ್ರಿಕಾ ಗೋಷ್ಠಿಯಲ್ಲಿ ಪ್ರಕರಣದ ತನಿಖೆಯು ಪೂರ್ಣಗೊಳ್ಳುವ ಮೊದಲೇ ಸಾರ್ವಜನಿಕರಲ್ಲಿ ಸುಳ್ಳು ಮಾಹಿತಿ ನೀಡಿ ಸಾರ್ವಜನಿಕರಲ್ಲಿ ಗಲಭೆ-ಗೊಂದಲ ಉಂಟು ಮಾಡುವಂತಿದ್ದು, ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಾಕಾರಿ ಹೇಳಿಕೆ ನೀಡಿದ ಆರೋಪಿ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 123/2025, ಕಲಂ: 353(2) BNS ರಂತೆ ಪ್ರಕರಣ ದಾಖಲಾಗಿರುತ್ತದೆ.
