ಮಂಗಳೂರು: ಧಾರಾಕಾರವಾಗಿ ಸುರಿದ ಮಳೆ ಹಿನ್ನೆಲೆಯಲ್ಲಿ ಮಂಗಳೂರು ನಗರದ ಅಲ್ಲಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಸರ್ಕ್ಯೂಟ್ ಹೌಸ್ – ಬಿಜೈ ಬಳಿ ತಡರಾತ್ರಿ ಗುಡ್ಡ ಕುಸಿದು ರಸ್ತೆಗೆ ಬಿದ್ದು ಸಂಚಾರ ವ್ಯವಸ್ಥೆಗೆ ತೊಂದರೆ ಆಗಿದೆ.
ದ.ಕ.ಜಿಲ್ಲೆಯ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಬುಧವಾರ ರಾತ್ರಿ ಬಿರುಸು ಪಡೆದ ಮಳೆ ಈಗಲೂ ಮುಂದುವರಿದಿದೆ. ಕೆಲವಡೆ ಮನೆಗಳಿಗೂ ಹಾನಿಯಾಗಿದೆ.
ಜಿಲ್ಲಾಧಿಕಾರಿ ದರ್ಶನ್ ಎಚ್ ವಿ ಅವರು ಬುಧವಾರ ರಾತ್ರಿ ಬಿಜೈ ಬಟ್ಟಗುಡ್ಡ, ಆರ್ಯಸಮಾಜ ರಸ್ತೆ, ಪಂಪ್‌ವೆಲ್ , ಮಾಲೆಮಾರ್, ಕಾವೂರು ಉಲ್ಲಾಸ ನಗರ, ಕೊಟ್ಟಾರ ಚೌಕಿ ಮತ್ತಿತರ ಕಡೆಗಳಲ್ಲಾದ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದರು.