ನಿಮಿಷಾ ಪ್ರಿಯಾ ಮರಣದಂಡನೆ ಕುರಿತು ಮಹತ್ವದ ನಿರ್ಧಾರ ಕೈಗೊಂಡ ಕೇಂದ್ರ ಸರ್ಕಾರ!

ನವದೆಹಲಿ: ಯೆಮನ್‌ನಲ್ಲಿ ಮರಣದಂಡನೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷಪ್ರಿಯಾ ಪ್ರಕರಣ ದೇಶದಾದ್ಯಂತ ಸಂಚಲನ ಸೃಷ್ಟಿಸುತ್ತಿದೆ. ಈಗಾಗಲೇ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

ಹೌದು, ಕೆಲದಿನಗಳ ಹಿಂದೆ ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಯೆಮನ್ ಸರ್ಕಾರ ಮರಣದಂಡನೆ ರದ್ದುಗೊಳಿಸಿದೆ ಎಂದು ಸುದ್ದಿಯಾಗಿತ್ತು. ಆದರೆ ಈ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಸ್ಪಷ್ಟನೆ ನೀಡಿರಲಿಲ್ಲ. ಇದೀಗ ವದಂತಿಗಳಿಂದ ದೂರವಿರುವಂತೆ ವಿದೇಶಾಂಗ ಸಚಿವಾಲಯ ತಿಳಿಸಿದೆ. “ಇದು ಸೂಕ್ಷ್ಮ ವಿಷಯವಾಗಿದ್ದು, ಭಾರತ ಸರ್ಕಾರ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದು, ವಿದೇಶಿ ಸ್ನೇಹಪರ ರಾಷ್ಟ್ರಗಳೊಂದಿಗೆ ಸಂಪರ್ಕವೂ ಮುಂದುವರೆದಿದೆ” ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಕೇರಳದ ನರ್ಸ್ ಗೆ ಯೆಮೆನ್ ನಲ್ಲಿ ಮರಣದಂಡನೆ; ಏನಿದು ಪ್ರಕರಣ ? “ಭಾರತದ ನಿರಂತರ ಮಾತುಕತೆ ಹಾಗೂ ರಾಜತಾಂತ್ರಿಕ ಪ್ರಯತ್ನಗಳಿಂದ ಜು.16ರಂದು ನಿಗದಿಯಾಗಿದ್ದ ನಿಮಿಷರ ಗಲ್ಲುಶಿಕ್ಷೆ ಮುಂದೂಡಿಕೆಯಾಗಿದೆ. ಆದರೆ ರದ್ದಾಗಿದೆ ಎಂಬುದು ಸುಳ್ಳು ಸುದ್ದಿಗಳಾಗಿವೆ. ಈ ಬಗ್ಗೆ ಸಚಿವಾಲಯವೇ ಸ್ಪಷ್ಟನೆ ನೀಡುವವರೆಗೂ ಸುಳ್ಳು ಸುದ್ದಿಗಳನ್ನು ನಂಬಬೇಡಿ” ಎಂದು ಜೈಸ್ವಾಲ್ ಹೇಳಿದ್ದಾರೆ.

Leave a Reply