ಬ್ರಹ್ಮಾವರ: ಇಲ್ಲಿನ ಉಪ್ಪಿನಕೋಟೆ ಬಳಿ ಬುಧವಾರ ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟಿ ಸವಾರ ವಾಮನ ಆಚಾರ್ಯ(61) ಮೃತಪಟ್ಟಿದ್ದಾರೆ.
ಬ್ರಹ್ಮಾವರ ಕಡೆಯಿಂದ ಕುಂದಾಪುರದತ್ತ ರಾ.ಹೆ.ಯಲ್ಲಿ ತೆರಳುತ್ತಿದ್ದ ಸ್ಕೂಟಿಗೆ ಅದೇ ದಿಕ್ಕಿನಲ್ಲಿ ಸಾಗುತ್ತಿದ್ದ ಕಾರು ಢಿಕ್ಕಿ ಹೊಡೆಯಿತು.
ಸ್ಕೂಟಿ ಸವಾರ ವಾಮನ ಆಚಾರ್ಯ ಅವರು ರಸ್ತೆಗೆ ಬಿದ್ದು ಮುಖಕ್ಕೆ ತೀವ್ರ ಗಾಯಗಳಾಯಿತು. ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.