ಬೀದರ್ ಜಿಲ್ಲೆಯಲ್ಲಿ 55 ವರ್ಷದ ಮಹಿಳೆಯನ್ನು ಆಕೆಯ ಮದ್ಯವ್ಯಸನಿ ಮಗ ಕೊಡಲಿಯಿಂದ ಕೊಚ್ಚಿ ಕೊಂದಿರುವುದಾಗಿ ಬುಧವಾರ ಪೊಲೀಸರು ತಿಳಿಸಿದ್ದಾರೆ.
ಬೀದರ್ ನಗರದ ಚೆಟ್ಟಿ ಗಲ್ಲಿಯಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಶಕುಂತಲಾ ರಾಜಕುಮಾರ ಶಿಂಧೆ ಎಂದು ಗುರುತಿಸಲಾಗಿದೆ.
ಘಟನೆಯ ನಂತರ ಆರೋಪಿ ದೀಪಕ್ ನಾಪತ್ತೆಯಾಗಿದ್ದು, ಆತನ ಪತ್ತೆಗೆ ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕುಡುಕನಾದ ದೀಪಕ್ ಮದ್ಯಕ್ಕೆ ಹಣ ನೀಡುವಂತೆ ಪ್ರತಿದಿನ ತಾಯಿಯೊಂದಿಗೆ ಜಗಳ ಮಾಡುತ್ತಿದ್ದ. ಮಂಗಳವಾರ ಮತ್ತೆ ಹಣಕ್ಕೆ ಬೇಡಿಕೆ ಇಟ್ಟಾಗ ತಾಯಿ ನಿರಾಕರಿಸಿದ್ದು, ಇಬ್ಬರ ನಡುವೆ ಜಗಳವಾಗಿದೆ.
ಕೋಪದ ಭರದಲ್ಲಿ ವ್ಯಕ್ತಿ ತನ್ನ ತಾಯಿಯ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ. ಸಂಬಂಧಿಕರು ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾಳೆ. ಹುಮನಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.