ಬೆಳ್ತಂಗಡಿ: ಸರಣಿ ಅಪಘಾತ – ಮೂವರು ಗಂಭೀರ

ಬೆಳ್ತಂಗಡಿ: ಆಟೋ ರಿಕ್ಷಾ, ಟೆಂಪೊ, ಸಿಮೆಂಟ್ ಮಿಕ್ಸಿಂಗ್ ಲಾರಿಯ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಮೂವರು ಗಂಭೀರ ಗಾಯಗೊಂಡ ಘಟನೆ ಉಜಿರೆ ಸಮೀಪದ ಟಿಬಿ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಗಾಯಗೊಂಡವರನ್ನು ಆಟೋ ಚಾಲಕ ಬಂಟ್ವಾಳದ ದಾಮೋದರ (32), ಪ್ರಯಾಣಿಕರಾದ ಸೃಜನ್ (27), ಬಿಜು (38) ಎಂದು ಗುರುತಿಸಲಾಗಿದೆ. ಗಾಯಾಳುಗಳಿಗೆ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳ್ತಂಗಡಿಯಿಂದ ಉಜಿರೆ ಕಡೆಗೆ ಹೋಗುತ್ತಿದ್ದ ಸಿಮೆಂಟ್ ಮಿಕ್ಸಿಂಗ್ ಲಾರಿಯ ಚಾಲಕ ವಾಹನವನ್ನು ನಿಧಾನಗೊಳಿಸಿದಾಗ ಹಿಂದೆ ಬರುತ್ತಿದ್ದ ರಿಕ್ಷಾಕ್ಕೆ ಹಿಂದಿನಿಂದ ಬಂದ ಟೆಂಪೊ ಡಿಕ್ಕಿ ಹೊಡೆದಿದೆ. ಆಟೋ ರಿಕ್ಷಾ ಎರಡು ವಾಹನಗಳ ನಡುವೆ ಸಿಲುಕಿ ಸಂಪೂರ್ಣ ಜಖಂಗೊಂಡಿದೆ. ಈ ಸಂಬಂಧ ಬೆಳ್ತಂಗಡಿ ಟ್ರಾಫಿಕ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲವು ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು.

Leave a Reply