ವಿಟ್ಲ: ಕನ್ಯಾನ ಎಕ್ಸಲೆಂಟ್ ಪಬ್ಲಿಕ್ ಸ್ಕೂಲ್ ಗೆ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ

ವಿಟ್ಲ: ಕನ್ಯಾನ ಎಕ್ಸಲೆಂಟ್ ಪಬ್ಲಿಕ್ ಸ್ಕೂಲ್ ಗೆ ಇಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ಮಂಜುನಾಥ್ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದರು.

ವಿದ್ಯಾರ್ಥಿಗಳ ಶಿಕ್ಷಣದ ಬಗ್ಗೆ ಮತ್ತು ಸ್ವಚ್ಛತೆ ಬಗ್ಗೆ ಶಿಕ್ಷಕರಲ್ಲಿ ಮಾತುಕತೆ ನಡೆಸಿದರು. ಇನ್ನು ಕಟ್ಟಡದ ಬಗ್ಗೆ ಒಳ್ಳೆಯ ಅಭಿಪ್ರಾಯವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ನೀಡಿದರು.
ಈ ಸಂದರ್ಭದಲ್ಲಿ ಕನ್ಯಾನ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ರೇಖಾ ರಮೇಶ್ ಉಪಾಧ್ಯಕ್ಷರಾದ ಅಬ್ದುಲ್ ರಹಿಮಾನ್ ಉಪಸ್ಥಿತರಿದ್ದರು.

Leave a Reply