ಎಲ್‌ಪಿಜಿ ಸಿಲಿಂಡರ್ ಬೆಲೆ 209 ರೂ. ಹೆಚ್ಚಳ

ನವದೆಹಲಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಭಾನುವಾರ 209 ರೂ.ಗಳಷ್ಟು ಹೆಚ್ಚಿಸಲಾಗಿದೆ.

ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಗಳ ಬೆಲೆಯನ್ನು 158 ರೂ ಕಡಿತಗೊಳಿಸಿದ ಸುಮಾರು ಒಂದು ತಿಂಗಳ ನಂತರ ಬೆಲೆಯಲ್ಲಿ ಈ ಹೆಚ್ಚಳವಾಗಿದೆ.

ಇನ್ನು ವಾಣಿಜ್ಯ ಮತ್ತು ಗೃಹಬಳಕೆಯ ಎಲ್ ಪಿಜಿ (ದ್ರವೀಕೃತ ಪೆಟ್ರೋಲಿಯಂ ಅನಿಲ) ಸಿಲಿಂಡರ್‌ ಗಳ ಬೆಲೆಯು ಪ್ರತಿ ತಿಂಗಳ ಮೊದಲ ದಿನದಂದು ಮಾಸಿಕ ಪರಿಷ್ಕರಣೆಗಳಿಗೆ ಒಳಗಾಗುತ್ತದೆ.

Leave a Reply