ರಾಗಿಗುಡ್ಡ ಘಟನೆ ಬೆನ್ನಲ್ಲೇ ಶಿವಮೊಗ್ಗದಲ್ಲಿ ಯುವಕನಿಗೆ ಚಾಕು ಇರಿತ

ಶಿವಮೊಗ್ಗ : ರಾಗಿಗುಡ್ಡ ಘಟನೆ ಬೆನ್ನಲ್ಲೇ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಹಿಂದೂ ಯುವಕನಿಗೆ ಅನ್ಯಕೋಮಿನ ಯುವಕರು ಚಾಕು ಇರಿದಿದ್ದಾರೆ.

ಭದ್ರಾವತಿಯ ಹನುಮಂತನಗರದ ಬಡಾವಣೆಯಲ್ಲಿ ಘಟನೆ ನಡೆದಿದ್ದು, ನಂದಕುಮಾರ (32) ಎಂಬಾತನಿಗೆ ಚಾಕು ಇರಿಯಲಾಗಿದೆ. ಗಾಯಗೊಂಡ ಯುವಕ ಭದ್ರಾವತಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಘಟನೆ ಹಿನ್ನೆಲೆ ವ್ಯಾಪಕ ಆಕ್ರೋಶವಾಗಿದ್ದು, ಶೀಘ್ರವೇ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಲಾಗಿದೆ. ಕೂಡಲೇ ಅಲರ್ಟ್ ಆದ ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸಿ ತಕ್ಷಣ ಕ್ರಮಕ್ಕೆ ಮುಂದಾಗಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Leave a Reply