ಉಳ್ಳಾಲ: ಕಾರು ನಿಲ್ಲಿಸಿ ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ..!

ಚಿಕ್ಕಮಗಳೂರಿನ ಮುಗುಳಬಳ್ಳಿಗೋಕುಲ್ ಫಾರ್ಮ್ ನಿವಾಸಿ ಬಿ.ಎಸ್ ಶಂಕರಗೌಡ ಎಂಬವರ ಪುತ್ರ ಪ್ರಸನ್ನ (37)  ಉಳ್ಳಾಲದ ನೇತ್ರಾವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಧ್ಯಾಹ್ನ ವೇಳೆ ತೊಕ್ಕೊಟ್ಟು ಕಡೆಯಿಂದ ಬಂದು ರಾ.ಹೆ.66 ರ ಬಳಿ ಕಾರು ನಿಲ್ಲಿಸಿ ತಡೆಬೇಲಿಯ ಬದಿಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನೆಯನ್ನು ಪ್ರತ್ಯಕ್ಷ ಕಂಡವರು ತಕ್ಷಣ ರಕ್ಷಣೆಗೆ ಓಡಿದರೂ ಅದಾಗಲೇ ನೀರುಪಾಲಾಗಿದ್ದರು. ಘಟನಾ ಸ್ಥಳದಲ್ಲಿ ಕುತೂಹಲಿಗರು ಜಮಾಯಿಸಿದ್ದರಿಂದ ರಸ್ತೆ ಸಂಚಾರದಲ್ಲಿ ಕೆಲಕಾಲ ಅಡಚಣೆಯುಂಟಾಯಿತು.

Leave a Reply