SDPI ಕುವೆಟ್ಟು ಗ್ರಾಮ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ (ನ-5): ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುವೆಟ್ಟು ಗ್ರಾಮ ಸಮಿತಿ ಸಭೆ ಶನಿವಾರ ಸುನ್ನತ್ ಕೆರೆಯಲ್ಲಿ ನಡೆಯಿತು. ವೀಕ್ಷಕರಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ನವಾಝ್ ಕಟ್ಟೆ ಭಾಗವಹಿಸಿ ಪಕ್ಷದ ಕಾರ್ಯ ಚಟುವಟಿಕೆ ಹಾಗೂ ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಿದರು.
ಕುವೆಟ್ಟು ನೂತನ ಗ್ರಾಮ ಸಮಿತಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಅಸ್ಲಂ ಮದ್ದಡ್ಕ ಹಾಗೂ ಕಾರ್ಯದರ್ಶಿಯಾಗಿ ಹನೀಫ್ ಪಾಡ್ಯಾರ್ ಆಯ್ಕೆಯಾದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್‌ಡಿಪಿಐ ಕಾರ್ಯದರ್ಶಿ ನಿಸಾರ್ ಕುದ್ರಡ್ಕ, ಸಮಿತಿ ಸದಸ್ಯರಾದ ಸಾಲಿ ಮದ್ದಡ್ಕ, ಕುವೆಟ್ಟು ಬ್ಲಾಕ್ ಸಮಿತಿ ಕಾರ್ಯದರ್ಶಿ ಸಮೀರ್ ಎಸ್ ಕೆ, ಮದ್ದಡ್ಕ, ಗುರುವಾಯನಕೆರೆ, ಸುನ್ನತ್ ಕೆರೆ, ಪಾಡ್ಯರ್, ಬದ್ಯಾರ್ ಬೂತ್ ನ ಪಕ್ಷದ ಕಾರ್ಯಕರ್ತರು ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Leave a Reply