ವಿಜಯಪುರ : ನನ್ನ ಕ್ಷೇತ್ರಗಳಿಗೆ ಆದಷ್ಟು ಬೇಗ ನೀರು ಹರಿಸದೆ ಹೋದಲ್ಲಿ ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ವಿಜಯಪುರ ಜಿಲ್ಲೆಯ ಇಂಡಿ ಮತಕ್ಷೇತ್ರದ ಕಾಂಗ್ರೆಸ್ ಶಾಸಕರಾದ ಯಶವಂತರಾಯೇಗೌಡ ಪಾಟೀಲ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಇಂಡಿ ಕ್ಷೇತ್ರದ ಸುತ್ತಮುತ್ತಲಿನ ಹಳ್ಳಿಗಳಿಗೆ ನೀರು ಇಲ್ಲದೆ ಜನರು ಹಾಗೂ ರೈತರು ಸಂಕಷ್ಟ ಪಡುತ್ತಿದ್ದಾರೆ.
ನನ್ನ ಕ್ಷೇತ್ರದ ಗ್ರಾಮಗಳಿಗೆ ಒಂದು ವೇಳೆ ನೀರು ಬಿಡದೆ ಹೋದರೆ ರಾಜೀನಾಮೆ ನೀಡುತ್ತೇನೆ ಎಂದು ಸ್ವಪಕ್ಷದ ವಿರುದ್ಧವೇ ಯಶವಂತರಾಯ ಗೌಡ ಪಾಟೀಲ್ ಅಸಮಾಧಾನ ಹೊರಹಾಕಿದ್ದಾರೆ.
ಇಂಡಿ ತಾಲೂಕಿನ ಕಟ್ಟ ಕಡೆಯ ಹಳ್ಳಿಗಳಿಗೂ ಕೂಡ ನೀರು ಬಂದಿಲ್ಲ. ಕ್ಷೇತ್ರದ ಜನರು ನೀರು ಇಲ್ಲದೆ ಸಾಕಷ್ಟು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಕ್ಷೇತ್ರದ ಜನರಿಗೆ ಅನುಕೂಲ ಆಗದಿದ್ದರೆ ನಾಳೆ ರಾಜೀನಾಮೆ ನೀಡುತ್ತೇನೆ. ನಾಡಿದ್ದು ರಾಜಕೀಯದಿಂದಲೇ ನಿವೃತ್ತಿ ಆಗುತ್ತೇನೆ ಎಂದು ವಿಜಯಪುರ ಜಿಲ್ಲಾ ಆಡಳಿತದ ವಿರುದ್ಧ ಶಾಸಕ ಯಶವಂತರಾಯ ಗೌಡ ಪಾಟೀಲ್ ಆಕ್ರೋಶ ಹೊರಹಾಕಿದ್ದಾರೆ.