ಇಂದು ವಿರೋಧ ಪಕ್ಷದ ನಾಯಕನ ಆಯ್ಕೆ: ಯಾರಿಗೆ ಒಲಿಯಲಿದೆ ಪಟ್ಟ?

ಬೆಂಗಳೂರು: ವಿಧಾನಸಭೆ ಮತ್ತು ವಿಧಾನ ಪರಿಷತ್​ ವಿಪಕ್ಷ ನಾಯಕರ ಆಯ್ಕೆ ಸಂಬಂಧ ಇಂದು ಬಿಜೆಪಿಯ ಮಹತ್ವದ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ವಿರೋಧ ಪಕ್ಷದ ನಾಯಕರ ಆಯ್ಕೆಯಾಗುವ ಸಾಧ್ಯತೆ ಇದೆ.

ವಿಪಕ್ಷ ನಾಯಕರ ಆಯ್ಕೆ ವಿಚಾರವಾಗಿ ಬೆಂಗಳೂರಿನಲ್ಲಿ ಇಂದು ಸಂಜೆ 6 ಗಂಟೆಗೆ ಖಾಸಗಿ ಹೋಟೆಲ್​ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಸಭೆಯಲ್ಲಿ ಹೈಕಮಾಂಡ್ ವೀಕ್ಷಕರು ವಿಪಕ್ಷ ನಾಯಕರ ಹೆಸರು ಘೋಷಣೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

ವಿಧಾನಸಭೆಗೆ ಒಕ್ಕಲಿಗ ಮತ್ತು ವಿಧಾನ ಪರಿಷತ್​ಗೆ ಹಿಂದುಳಿದ ವರ್ಗಕ್ಕೆ ಅವಕಾಶ ಸಿಗುವ ಸಾಧ್ಯತೆ ಇದ್ದು, ವಿಧಾನಸಭೆಗೆ ಶಾಸಕರಾದ ಆರ್. ಅಶೋಕ್, ಡಾ. ಅಶ್ವಥ್ ನಾರಾಯಣ ಮತ್ತು ಅರಗ ಜ್ಞಾನೇಂದ್ರ ಹೆಸರು ಕೇಳಿಬರುತ್ತಿದೆ. ಇನ್ನು ವಿಧಾನ ಪರಿಷರ್​ಗೆ ಕೋಟ ಶ್ರೀನಿವಾಸ ಪೂಜಾರಿ, ತೇಜಸ್ವಿನಿ ಗೌಡ, ಛಲವಾದಿ ನಾರಾಯಣಸ್ವಾಮಿ ಮತ್ತು ಭಾರತಿ ಶೆಟ್ಟಿ ಹೆಸರು ಒಬಿಸಿ ಕೋಟದಲ್ಲಿ ಸುನಿಲ್ ಕುಮಾರ್ ಹೆಸರು ಮುಂಚೂಣಿಯಲ್ಲಿದೆ.

ಬಹುತೇಕ ಕೆಳಮನೆಗೆ ಆರ್. ಅಶೋಕ್ ಮತ್ತು ಮೇಲ್ಮನೆಗೆ ಕೋಟ ಶ್ರೀನಿವಾಸ ಪೂಜಾರಿ ವಿಪಕ್ಷ ನಾಯಕರಾಗಿ ಆಯ್ಕೆಯಾಗುವ ಸಾಧ್ಯತೆ ಇದೆ. ಬಿಜೆಪಿ ಶಾಸಕಾಂಗ ಸಭೆಗೆ ಹೈಕಮಾಂಡ್ ವೀಕ್ಷಕರಾಗಿ ಕೇಂದ್ರ ಸಚಿವೆ ನಿರ್ಮಲಾ‌ ಸೀತಾರಾಮನ್ ಭಾಗವಹಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Leave a Reply