ಸಿಲಿಂಡರ್ ಸ್ಫೋಟ- ಐವರಿಗೆ ಗಂಭೀರ ಗಾಯ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು, ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಬೆಂಗಳೂರಿನ ವೀವರ್ಸ್ ಕಾಲೋನಿ ಬಳಿಯ ಮಾರುತಿ ಬಡಾವಣೆಯ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ಉತ್ತರ ಪ್ರದೇಶದ ವಾರಣಾಸಿ ಮೂಲದ ಐವರು ಗಾಯಗೊಂಡಿದ್ದಾರೆ.

 

ಮುಂಜಾನೆ 5:30ರ ಸುಮಾರಿಗೆ ಸಿಲಿಂಡರ್ ಸೋರಿಕೆಯಾಗಿ ಸ್ಫೋಟಗೊಂಡಿದೆ. ಮನೆಯಲ್ಲಿದ್ದ ಜಮಾಲ್, ನಾಜಿಯಾ, ಇರ್ಫಾನ್, ಗುಲಾಬ್, ಶಹಜಾದ್ ಎಂಬುವವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿಲಿಂಡರ್ ಸ್ಫೋಟದ ತೀವ್ರತೆಗೆ ಮನೆಯ ಕಿಟಕಿಗಳು ಛಿದ್ರಗೊಂಡಿವೆ. ಅಲ್ಲದೇ ಮನೆಯ ಮುಂಭಾಗ ನಿಲ್ಲಿಸಿದ್ದ ಕಾರಿನ ಗಾಜುಗಳು ಪುಡಿ ಪುಡಿಯಾಗಿವೆ. ಮಾರ್ಟಿನ್ ಎಂಬುವವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಕೋಣನಕುಂಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply