ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ರೌಡಿ ಶೀಟರ್ ಕಾಲಿಗೆ ಗುಂಡೇಟು

ಹುಬ್ಬಳ್ಳಿ: ಹುಬ್ಬಳ್ಳಿಯ ಗದಗ ರಸ್ತೆಯ ರೈಲ್ವೆ ಬ್ರಿಡ್ಜ್ ಬಳಿ ಸ್ಥಳ ಮಹಜರು ವೇಳೆ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ರೌಡಿ ಶೀಟರ್ ಒರ್ವನಿಗೆ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ.

ಅಪಹರಣ, ಕೊಲೆಗೆ ಯತ್ನ, ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಸತೀಶ ಗೋನಾ ಎಂಬಾತ ವ್ಯಕ್ತಿಯೊಬ್ಬರ ಕೊಲೆಗೆ ಸಂಚು ರೂಪಿಸಿ ಶನಿವಾರ ಕೈಯಲ್ಲಿ ತಲವಾರು ಹಿಡಿದು ಹುಬ್ಬಳ್ಳಿಯ ಗದಗ ರಸ್ತೆಯ ರೇಲ್ವೆ ಬ್ರಿಡ್ಜ್ ಬಳಿ ಕಾಯುತ್ತಿದ್ದನೆನ್ನಲಾಗಿದೆ. ಈ ಬಗ್ಗೆ ಮಾಹಿತಿ ಅರಿತ ಶಹರ ಠಾಣೆ ಇನ್ ಸ್ಪೆಕ್ಟರ್ ರಫೀಕ್ ತಹಶೀಲ್ದಾರ್ ನೇತೃತ್ವದ ಪಿಎಸ್ಸೈ ವಿನೋದರನ್ನು ಒಳಗೊಂಡ ಪೊಲೀಸ್ ತಂಡ ಆತನನ್ನು ಬಂಧಿಸಿತ್ತು

ಆರೋಪಿಯನ್ನು ಸ್ಥಳ ಮಹಜರಿಗೆ ಕರೆ ತಂದಾಗ ಆತ ಪೊಲೀಸರ ಮೇಲೆಯೇ ಕಲ್ಲಿನಿಂದ ಹಲ್ಲೆಗೆ ಮುಂದಾಗಿದ್ದಾನೆ. ಈ ವೇಳೆ ಇನ್ ಸ್ಪೆಕ್ಟರ್ ರಫೀಕ್ ತಹಶೀಲ್ದಾರ್ ಅವರು ಸತೀಶ್ ಕಾಲಿಗೆ ಗುಂಡಿಕ್ಕಿದ್ದಾರೆ. ಗಾಯಗೊಂಡಿರುವ ಆತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Leave a Reply