ಬೆಳ್ತಂಗಡಿ: ನಿಡ್ಲೆ ಗ್ರಾಮದ ಬೂಡುಜಾಲು ಎಂಬಲ್ಲಿ ರಸ್ತೆ ಬದಿಯಲ್ಲಿದ್ದ ಗೂಡಂಗಡಿಯನ್ನು ಕಿಡಿಗೇಡಿ ಗಳು ರಾತ್ರಿ ವೇಳೆ ಧ್ವಂಸಗೊಳಿಸಿದ ಘಟನೆ ಸಂಭವಿಸಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.
ಕೊಕ್ಕಡ ಗ್ರಾಮದ ಮಲ್ಲಿಗೆ ಮಜಲು ನಿವಾಸಿ ಅಬ್ದುಲ್ ಅಜೀಜ್ ಅವರು ಕಳೆದ ಮೂರು ವರ್ಷಗಳಿಂದ ರಾಜ್ಯ ಹೆದ್ದಾರಿಯ ಬದಿಯಲ್ಲಿ ಗೂಡಂಗಡಿ ಇರಿಸಿ ವ್ಯಾಪಾರ ನಡೆಸುತ್ತಿದ್ದರು.
ಶುಕ್ರವಾರ ರಾತ್ರಿಯ ವೇಳೆ ಎಂದಿನಂತೆ ಅಂಗಡಿಯನ್ನು ಮುಚ್ಚಿ ಹೋಗಿದ್ದ ಅಬ್ದುಲ್ ಅಜೀಜ್ ಶನಿವಾರ ಬೆಳಗ್ಗೆ ಬಂದು ನೋಡಿದಾಗ ಅಂಗಡಿಯನ್ನು ಧ್ವಂಸಗೊಳಿಸಿರು ವುದು ಕಂಡು ಬಂದಿದೆ.
ಅಂಗಡಿಯಲ್ಲಿದ್ದ ವಸ್ತುಗಳೆಲ್ಲವನ್ನು ಹೊರಗೆಳೆದು ನಾಶಗೊಳಿಸಲಾಗಿದೆ. ತಂಪು ಪಾನೀಯಗಳ ಬಾಟ್ಲಿಗಳನ್ನು ಒಡೆದು ಹಾಕಲಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಲಾಗಿದೆ.
ಬಂಟ್ವಾಳ ತಾಲೂಕಿನ ಬ್ರಹ್ಮರಕೊಟ್ಲುವಿನಲ್ಲಿ ಯಾವುದೇ ಮೂಲಭೂತ ಸೌಕರ್ಯಗಳಿಲ್ಲದ, ಅವೈಜ್ಞಾನಿಕ ಟೋಲ್ ಪ್ಲಾಜಾ ಇದ್ದು ಇಲ್ಲಿ ಕಳೆದ ಹಲವು ವರ್ಷಗಳಿಂದ ಹಗಲು ದರೋಡೆ ನಡೆಸುತ್ತಿರುವುದು ಸಾಮಾನ್ಯವಾಗಿ ಬಿಟ್ಟಿದೆ. ಮಾತ್ರವಲ್ಲದೆ…
ದಕ್ಷಿಣ ಕನ್ನಡ-ಉಡುಪಿ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಆಕ್ಟೋಬರ್21 ರಂದು ಉಪಚುನಾವಣೆ ಚುನಾವಣೆ ನಡೆಯಲಿದ್ದು,ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು,ಕಾಂಗ್ರೆಸ್ ಗೆಲ್ಲುವ ಕುದುರೆಯ ತಲಾಷೆಯಲ್ಲಿದೆ…
ಉಡುಪಿ: ನಗರದ ಬನ್ನಂಜೆಯಲ್ಲಿರುವ ಜಯಲಕ್ಷ್ಮೀ ಸಿಲ್ಕ್ನಲ್ಲಿ ಇಂದು ಮಧ್ಯಾಹ್ನ ಪಿಸ್ತೂಲ್ ನಿಂದ ಮಿಸ್ ಫೈರಿಂಗ್ ಆದ ಪರಿಣಾಮ ಸಿಬ್ಬಂದಿಯೋರ್ವರು ಗಾಯಗೊಂಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ ಮಳಿಗೆಯಲ್ಲಿ…