ಉಡುಪಿ : ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ನೇಜಾರು ಹತ್ಯೆ ಪ್ರಕರಣದಲ್ಲಿ (Nejaru murder incident) ಆರೋಪಿ ಪ್ರವೀಣ್ ಚೌಗಲೆಯ (Praveen chougale) ನ್ಯಾಯಾಂಗ ಬಂಧನ (Judicial custody) ಅವಧಿಯನ್ನು ಡಿ.18 ರವರೆಗೆ ವಿಸ್ತರಿಸಲಾಗಿದೆ. ಮಂಗಳವಾರ ಆರೋಪಿ ಪ್ರವೀಣ್ ಚೌಗಲೆಯನ್ನು ನ್ಯಾಯಾಧೀಶರ ಎದುರು ವೀಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಿ ತನಿಖೆಯ ದೃಷ್ಟಿಯಿಂದ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಗೆ ಕೋರಲಾಗಿತ್ತು.
ಡಿ. 5ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಪ್ರವೀಣ್ ಚೌಗಲೆಯನ್ನು ಹಿರಿಯಡಕದ ಜಿಲ್ಲಾ ಕಾರಾಗೃಹದಲ್ಲಿ ಪ್ರತ್ಯೇಕ ಸೆಲ್‌ನಲ್ಲಿ ಇರಿಸಲಾಗಿತ್ತು.ಬಳಿಕ ಹೆಚ್ಚಿನ ಭದ್ರತೆ ಒದಗಿಸುವ ಹಿನ್ನೆಲೆಯಲ್ಲಿ ನ. 27ರಂದು ಬೆಂಗಳೂರಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿತ್ತು.
ಡಿ. 18 ರಂದು ಮತ್ತೆ ಪ್ರವೀಣ್ ಚೌಗಲೆಯನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಎದುರು ಹಾಜರು ಪಡಿಸಲಾಗುತ್ತದೆ. ಚಾರ್ಜ್‌ಶೀಟ್ ಸಲ್ಲಿಕೆ ಸಂದರ್ಭ ಆತನನ್ನು ಮುಖತಃ ಕೋರ್ಟ್‌ಗೆ ಹಾಜರುಪಡಿಸುವ ಸಾಧ್ಯತೆಗಳಿವೆ.