ಕಾರು ಮತ್ತು ಬೈಕ್ ಅಪಘಾತದಲ್ಲಿ ಕಾಲೇಜ್ ವಿದ್ಯಾರ್ಥಿ ಮೃತ್ಯು..!

ಕಾರು ಮತ್ತು ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ಕಾಲೇಜ್ ವಿದ್ಯಾರ್ಥಿ ಮೃತಪಟ್ಟ ಘಟನೆ ಕಾಸರಗೋಡು ಸಮೀಪದ ಬೇಕಲ ಠಾಣಾ ವ್ಯಾಪ್ತಿಯ ಚೆಮ್ನಾಡ್ ಬಳಿ ನಡೆದಿದೆ.

ಚೆಮ್ನಾಡ್ ಕೋಳಿಯಡ್ಕದ ಸಫ್ರಝುಲ್ ಅಮಾನ್ (20) ಮೃತಪಟ್ಟ ಯುವಕನಾಗಿದ್ದಾನೆ. ಗಂಭೀರವಾಗಿ ಗಾಯಗೊಂಡ ಅಮಾನ್ ನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಅಮಾನ್ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ . ಬೇಕಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply