ಮಂಗಳೂರು: ಪೊಳಲಿ ದ್ವಾರದ ಬಳಿ ಬಸ್ ಪಲ್ಟಿ

ಮಂಗಳೂರು : ಖಾಸಗಿ ಬಸ್ ಪಲ್ಟಿಯಾಗಿ ಹಲವರು ಗಾಯಗೊಂಡ ಘಟನೆ ಗುರುಪುರ ಎಂಬಲ್ಲಿ ನಡೆದಿದೆ.

ಗುರುಪುರ ಕೈಕಂಬ ಪೊಳಲಿ ದ್ವಾರದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿದ್ದು, ಹಲವರಿಗೆ ಗಾಯಗಳಾಗಿದೆ ಎಂದು ವರದಿಯಾಗಿದೆ.

ಖಾಸಗಿ ಬಸ್ ಕೈಕಂಬದಿಂದ ಪೊಳಲಿ ಮಾರ್ಗವಾಗಿ ಬಿ.ಸಿ.ರೋಡ್ ಕಡೆಗೆ ತೆರಳುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

Leave a Reply