ಮತ್ತೊಂದು ಅಮಾನವೀಯ ಘಟನೆ: ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ

ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಸದಸ್ಯರೇ ಮಹಿಳೆಯನ್ನು ಅರೆ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಘಟನೆ ಬೆಳಗಾವಿ ಬೈಲಹೊಂಗಲದಲ್ಲಿ ನಡೆದಿದೆ.

ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದ್ದು ಮಹಿಳೆ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಭೀಮಾಶಂಕರ್​​ ಅವರಿಗೆ ದೂರು ನೀಡಿದ್ದಾರೆ.

 

ತನ್ನ ಜಮೀನಿನಲ್ಲಿ ಪೈಪ್​​ಲೈನ್​​ವೊಂದು ಹಾದು ಹೋಗಿದ್ದುದರಿಂದ ಬೆಳೆಹಾನಿಯಾಗುತ್ತಿದೆ ಎಂದು ಪೈಪ್ ಲೈನ್ ನ್ನು ತೆಗೆಯುವಂತೆ ಮಹಿಳೆ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ದೂರು ನೀಡಿದ್ದರು. ಹಲವು ಬಾರಿ ಮನವಿ ಮಾಡಿದ್ದರೂ ಗ್ರಾಮ ಪಂಚಾಯಿತಿಯವರು ಯಾವುದೇ ಕ್ರಮಕೈಗೊಂಡಿರಲಿಲ್ಲ.ಈ ವಿಚಾರವಾಗಿ ಮಹಿಳೆ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಸದಸ್ಯರ ನಡುವೆ ಮಾತಿನ ಚಕಮಕಿ ನಡೆದಿತ್ತು.

ನಂತರ ಗ್ರಾಮ ಪಂಚಾಯಿತಿ ಸದಸ್ಯ ಮಹಿಳೆ ವಿರುದ್ಧ ಬೈಲಹೊಂಗಲ ಪೊಲೀಸ್​ ಠಾಣೆಯಲ್ಲಿ ಜಾತಿ ನಿಂದನೆ ದೂರು ದಾಖಲಸಿದ್ದನು.

ಮಹಿಳೆ ಜೊತೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಸದಸ್ಯರು ಗಲಾಟೆ ಮಾಡಿ ತನ್ನನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದಾರೆಂದು ಮಹಿಳೆ ದೂರಿನಲ್ಲಿ ದಾಖಲಿಸಿದ್ದಾರೆ.

ಇತ್ತೀಚೆಗೆ ಬೆಳಗಾವಿಯ ಗ್ರಾಮವೊಂದರಲ್ಲಿ ಮಹಿಳೆಯನ್ನು ಬೆತ್ತಲೆ ಗೊಳಿಸಿ ಹಲ್ಲೆ ಮಾಡಿದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿದೆ.

Leave a Reply