ಹಾನಗಲ್ ನಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್ ಪ್ರಕರಣ; ಮತ್ತೆ ಇಬ್ಬರು ಆರೋಪಿಗಳು ಅರೆಸ್ಟ್

ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ಮಹಿಳೆಯ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾನಗಲ್ ಪೊಲೀಸರು ಇದೀಗ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದು, ಈವರೆಗೆ ಒಟ್ಟು 6 ಆರೋಪಿಗಳನ್ನು ಬಂಧಿಸಲಾಗಿದೆ.

ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಬಲೆ ಬೀಸಲಾಗಿದೆ.

ನೈತಿಕ ಪೊಲೀಸ್ ಗಿರಿ ನಡೆಸಿದ ಬಳಿಕ ಯುವಕರ ಗುಂಪು ಮಹಿಳೆಯನ್ನು ಎಳೆದೊಯ್ದು ಗ್ಯಾಂಗ್ ರೇಪ್ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಸಂತ್ರಸ್ಥ ಮಹಿಳೆ ದೂರು ದಾಖಲಿಸಿದ್ದರು.

ಇನ್ನು ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ ಸಂತ್ರಸ್ತೆ ಮನೆಗೆ ಇಂದು ಬಿಜೆಪಿ ಮಹಿಳಾ ನಿಯೋಗ ಭೇಟಿ ನೀಡುತ್ತಿದೆ.

Leave a Reply