ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ 31ವರ್ಷಗಳ ಸುಧೀರ್ಘ ಸೇವೆ ಸಲ್ಲಿಸಿದ್ದರು. ನಗರದ ರಾಮಕೃಷ್ಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಾಪಕ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು. ವಿಶ್ವ ಹಿಂದೂ ಪರಿಷತ್ತಿನ ಹಿತೈಷಿಗಳಾಗಿ ನಮ್ಮೆಲ್ಲ ಕಾರ್ಯಗಳಿಗೆ ನಿರಂತರ ಸಹಕಾರ ನೀಡುತ್ತಿದ್ದರು, ಇವರು ಧಾರ್ಮಿಕ ಕ್ಷೇತ್ರಕ್ಕೆ ಸೇವೆ ಸಲ್ಲಿಸಿದ್ದು ಮಾತ್ರವಲ್ಲದೇ, ಸಾಮಾಜಿಕ ಚಟುವಟಿಕೆಗಳಲ್ಲಿಯೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಇವರ ನಿಧನವು ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಅಪಾರ ಬಂಧುಮಿತ್ರರು ಹಾಗೂ ಕುಟುಂಬದವರಿಗೆ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿ ನೀಡಲಿ, ಮತ್ತು ಅವರ ದಿವ್ಯಾತ್ಮಕ್ಕೆ ಭಗವಂತ ಸದ್ಗತಿ ಕರುಣಿಸಲಿ ಎಂದು ವಿಶ್ವ ಹಿಂದೂ ಪರಿಷದ್ ಜಿಲ್ಲಾಧ್ಯಕ್ಷರಾದ ಎಚ್ ಕೆ ಪುರುಷೋತ್ತಮ್ ಮತ್ತು ಜಿಲ್ಲಾ ಕಾರ್ಯದರ್ಶಿ ಶಿವಾನಂದ್ ಮೆಂಡನ್ ಸಂತಾಪ ಸೂಚಿಸಿದರು