ಬಂಟ್ವಾಳ: ಬೈಕ್‌‌ಗೆ ಕಾರು ಢಿಕ್ಕಿ – ಸವಾರ ಮೃತ್ಯು

ಬಂಟ್ವಾಳ: ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘತಾದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಫೆ. ೧ ರಂದು ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಮಧ್ವ ಅಯ್ಯಪ್ಪ ಸ್ವಾಮಿ ಮಂದಿರದ ಬಳಿ ನಡೆದಿದೆ.

ಮೃತ ಬೈಕ್ ಸವಾರರನ್ನು ಬೆಳ್ತಂಗಡಿಯ ಪ್ರದೀಶ್ ಶೆಟ್ಟಿ ಎಂದು ಗುರುತಿಸಲಾಗಿದೆ.

ಪ್ರದೀಶ್ ಮಂಗಳೂರಿನಿಂದ ಬೆಳ್ತಂಗಡಿ ಕಡೆಗೆ ಬೈಕ್ ನಲ್ಲಿ ಬರುತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿಯ ಕಾವಳಕಟ್ಟೆ ಎಂಬಲ್ಲಿ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು, ತಕ್ಷಣ ಸ್ಥಳೀಯರು ಆಸ್ಪತ್ರೆಗೆ ಕೊಂಡು ಹೋಗಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಅದಾಗಲೇ ಪ್ರದೀಶ್ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

ಇನ್ನು ಈ ಬಗ್ಗೆ ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply