ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ; ಪ್ರಭಾವಿ ಬಿಜೆಪಿ ನಾಯಕ ಅರೆಸ್ಟ್​

ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಪಶ್ಚಿಮ ಬಂಗಾಳ ಪೊಲೀಸರು ಬಿಜೆಪಿ ನಾಯಕ ಸಬ್ಯಸಾಚಿ ಘೋಷ್​ನನ್ನು ವಶಕ್ಕೆ ಪಡೆದಿದ್ದಾರೆ. ಸಂದೇಶ್​ಖಾಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಟಿಎಂಸಿ ನಡುವಿನ ಜಟಾಪಟಿ ನಡುವೆಯೇ ಈ ಬೆಳವಣಿಗೆ ನಡೆದಿರುವುದು ವಿಪಕ್ಷಕ್ಕೆ ಭಾರೀ ಮುಜುಗರವನ್ನುಂಟು ಮಾಡಿದೆ.

ಹೌರಾದ ಲಾಡ್ಜ್​​ ಒಂದರಲ್ಲಿ ಸಬ್ಯಸಾಚಿ ಘೋಷ್​ ವೇಶ್ಯಾವಾಟಿಕೆ ನಡೆಸುತ್6ತಿದ್ದರು ಎಂಬ ಆರೋಪ ಕೇಳಿ ಬಂದಿದ್ದು, ಬಿಜೆಪಿ ಪಿಂಪ್‌ಗಳನ್ನು ರಕ್ಷಿಸುತ್ತಿದೆ ಎಂದು ಟಿಎಂಸಿ ಆರೋಪಿಸಿ ಕಿಡಿಕಾರಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಟಿಎಂಸಿ, ಬಿಜೆಪಿ ನಾಯಕ ಸಬ್ಯಸಾಚಿ ಹೌರಾದ ಸಂಕ್ರೈಲ್‌ನಲ್ಲಿರುವ ತಮ್ಮ ಹೋಟೆಲ್‌ನಲ್ಲಿ ಅಪ್ರಾಪ್ತ ವಯಸ್ಕರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿರುವುದು ಪೊಲೀಸ್​ ದಾಳಿಯಿಂದ ಬೆಳೆಕಿಗೆ ಬಂದಿದೆ. ಆರು ಮಂದಿ ಸಂತ್ರಸ್ತರನ್ನು ರಕ್ಷಿಸಲಾಗಿದ್ದು, 11 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಇದನ್ನು ಗಮನಿಸಿದರೆ ಬಿಜೆಪಿ ಬೇಟಿಗಳ ಬದಲಾಗಿ ಪಿಂಪ್​ಗಳ ರಕ್ಷಣೆಗೆ ನಿಂತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಕಿಡಿಕಾರಿದೆ.

ಸಂದೇಶ್​​ಖಾಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಳಿತರೂಢ ಟಿಎಂಸಿ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿರುವುದು ವಿಪಕ್ಷಕ್ಕೆ ಭಾರೀ ಹಿನ್ನಡೆಯಾಗಿದೆ. ಈ ನಿಟ್ಟಿನಲ್ಲಿ ಬಿಜೆಪಿ ಆರೋಪವನ್ನು ಹೇಗೆ ನಿಭಾಯಿಸಲಿದೆ ಎಂದು ಕಾದು ನೋಡಬೇಕಿದೆ.

Leave a Reply