SDPI ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಪಕ್ಷ ಸಮಾವೇಶ -ನೂರಕ್ಕೂ ಅಧಿಕ ಮಂದಿ ಪಕ್ಷಕ್ಕೆ ಸೇರ್ಪಡೆ

ಸುರತ್ಕಲ್ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಚೊಕ್ಕಬೆಟ್ಟುವಿನ ಎಂ.ಜೆ.ಎಂ ಹಾಲ್ ನಲ್ಲಿ ಕ್ಷೇತ್ರ ಅಧ್ಯಕ್ಷ ಉಸ್ಮಾನ್ ಗುರುಪುರ ರವರ ಅಧ್ಯಕ್ಷತೆಯಲ್ಲಿ ಪಕ್ಷದ ಸಮಾವೇಶ ನಡೆಯಿತು.

ಸಮಾವೇಶದ ಮುಖ್ಯ ಅತಿಥಿಯಾಗಿ ಆಗಮಿಸಿದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ತುಂಬೆಯವರು ಸಮಾವೇಶವನ್ನುದ್ದೇಶಿಸಿ ಮಾತನಾಡಿದರು. ಎಸ್.ಡಿ.ಪಿ.ಐ ರಾಜ್ಯ ಸಮಿತಿ ಸದಸ್ಯರಾದ ರಿಯಾಝ್ ಕಡಂಬು ರವರು ಅತಿಥಿ ಭಾಷಣ ಮಾಡಿದರು, ಜಿಲ್ಲಾಧ್ಯಕ್ಷರಾದ ಅನ್ವರ್ ಸಾದಾತ್ ಬಜತ್ತೂರು ರವರು ಸಮಾರೋಪ ಭಾಷಣ ಮಾಡಿದರು, ಕ್ಷೇತ್ರ ಸಮಿತಿ ಸದಸ್ಯ ಯಾಸೀನ್ ಅರ್ಕುಳ ರವರು ಸ್ವಾಗತಿಸಿ ಪ್ರಸ್ತಾವಿಕ ಮಾತಾಡಿದರು.


ಈ ಕಾರ್ಯಕ್ರಮದಲ್ಲಿ ಎಸ್.ಡಿ.ಪಿ.ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಡ್ಡೂರು, ವಿಮೆನ್ ಇಂಡಿಯಾ ಮೂವ್ಮೆಂಟ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಶಾ ವಾಮಂಜೂರು, ವಿಮೆನ್ ಇಂಡಿಯಾ ಮೂವ್ಮೆಂಟ್ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ ಅಧ್ಯಕ್ಷೆ ಅಫ್ಸ ಕೃಷ್ಣಾಪುರ, ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ ಕಾರ್ಯದರ್ಶಿ ಅಝರ್ ಉಳಾಯಿಬೆಟ್ಟು, ಗುರುಪುರ ಗ್ರಾಮ ಪಂಚಾಯತ್ ಅಧ್ಯಕ್ಷೆ ಸಫರಾ, ಅಡ್ಯಾರ್ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಝೀನತ್, ಮಲ್ಲೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಇಲ್ಯಾಸ್ ಪಾದೆ ಹಾಗೂ ಅಸೆಂಬ್ಲಿ ಮತ್ತು ಬ್ಲಾಕ್ ಸಮಿತಿಯ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply