ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ಬೆಂಕಿ ದುರಂತ ಪ್ರಕರಣಗಳು ಹೆಚ್ಚುತ್ತಿವೆ. ಆಕಸ್ಮಿಕ ಬೆಂಕಿ ಆಗಿರಬಹುದು ಶಾರ್ಟ್ ಸರ್ಕ್ಯೂಟ್ ಆಗಿರಬಹುದು ಅಥವಾ ಇನ್ಯಾವುದೋ ಕಾರಣಗಳಿಂದ ಬೆಂಕಿ ದುರಂತಗಳು ಸಂಭವಿಸಿ ಅನೇಕರು ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ.
ಇದೀಗ ಬೆಂಗಳೂರಿನ ಕೆಂಗೇರಿಯ ಉಪನಗರದ ಹೊಯ್ಸಳ ವೃತ್ತದಲ್ಲಿ ಆಕಸ್ಮಿಕ ಬೆಂಕಿಯಿಂದ ಬಟ್ಟೆ ಅಂಗಡಿಯವೊಂದು ಹತ್ತಿ ಉರಿದಿರುವ ಘಟನೆ ನಡೆದಿದೆ.
ಕೆಂಗೇರಿ ಉಪನಗರ ಬಳಿ ಹೊಯ್ಸಳ ವೃತ್ತದಲ್ಲಿ ಈ ಅವಘಡ ಸಂಭವಿಸಿದೆ.
ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದೆ. ಘಟನೆಯಲ್ಲಿ ಬಟ್ಟೆ ಅಂಗಡಿ ಸಂಪೂರ್ಣವಾಗಿ ಸುಟ್ಟು ಹೋಗಿದ್ದು ಅದೃಷ್ಟವಶಾತ್ ಯಾವುದೇ ರೀತಿಯಾದಂತಹ ಪ್ರಾಣಾಪಾಯ ಸಂಭವಿಸಿಲ್ಲ. ಕೆಂಗೇರಿ ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.