Visitors have accessed this post 163 times.
ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ವಿದ್ಯುತ್ ದರ ಇಳಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸರಾಸರಿ 100 ಯೂನಿಟ್ ಬಳಸುವವರಿಗೆ ಅನುಕೂಲವಾಗಲಿದೆ. ಪ್ರತಿ ಯೂನಿಟ್ ವಿದ್ಯುತ್ ದರ 1 ರೂ. 10 ಪೈಸೆ ದರ ಇಳಿಸಲಾಗಿದೆ.
ವಾಣಿಜ್ಯ ಬಳಕೆ ವಿದ್ಯುತ್ ದರದಲ್ಲಿಯೂ ಇಳಿಕೆ ಮಾಡಲಾಗಿದೆ. ವಾಣಿಜ್ಯ ಬಳಕೆ ವಿದ್ಯುತ್ ದರ ಯೂನಿಟ್ ಗೆ 1 ರೂ.25 ಪೈಸೆ ಕಡಿಮೆ ಮಾಡಲಾಗಿದೆ.
ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳಿಗೆ ಯೂನಿಟ್ ಗೆ 40 ಪೈಸೆ, ಖಾಸಗಿ ಏತನೀರಾವರಿ ಬಳಕೆ ದರ ಯೂನಿಟ್ ಗೆ 2 ರೂಪಾಯಿ, ಕೈಗಾರಿಕೆಗಳ ವಿದ್ಯುತ್ ದರದಲ್ಲಿ 50 ಪೈಸೆ ಹಾಗೂ ಅಪಾರ್ಟ್ ಮೆಂಟ್ ಗಳ ವಿದ್ಯುತ್ ದರದಲ್ಲಿ 10 ಪೈಸೆ ಇಳಿಕೆ ಮಾಡಲಾಗಿದೆ.
ಮಾರ್ಚ್ 1ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ. 5 ಎಸ್ಕಾಂ ಗಳು ವಿದ್ಯುತ್ ದರ ಪರಿಷ್ಕರಣೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದವು.