PUC ವಿದ್ಯಾರ್ಥಿಗಳೇ ಗಮನಿಸಿ : ಇಂದು ಫಲಿತಾಂಶ ಬರಲ್ಲ, ಎಲ್ಲಾ ಸುಳ್ಳು!

2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 01 ರಿಂದ ಮಾರ್ಚ್ 23 ರವರೆಗು ನಡೆಸಲಾಗಿತ್ತು. ಉತ್ತರ ಪತ್ರಿಕೆ ಮೌಲ್ಯಮಾಪನ ಕಾರ್ಯ, ತಕ್ಷಣ ಶುರುವಾಗಿತ್ತು. ಕರ್ನಾಟಕದ 1,124 ಕೇಂದ್ರಗಳಲ್ಲಿ ಸುಮಾರು 7 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು ಮಾರ್ಚ್ 25ರಿಂದ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಿತ್ತು.

ಹೀಗಾಗಿ ಇಂದು ಫಲಿತಾಂಶವು ಹೊರ ಬೀಳಲಿದೆ, ಎಂಬ ಸುದ್ದಿ ಹರಡಿತ್ತು. ಅಲ್ಲದೆ ಇದಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಕಲ ಸಿದ್ಧತೆನ ನಡೆಸಿದೆ ಎಂಬ ಸುಳ್ಳು ಸುದ್ದಿ ಹಬ್ಬಿದ್ದು. ಅದು ಸುಳ್ಳು ಎಂದು ಈಗ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿಯನ್ನ ನೀಡಿದೆ. ಹಾಗಾದ್ರೆ ಫಲಿತಾಂಶ ಯಾವಾಗ ಹೊರಬೀಳುತ್ತದೆ? ಬನ್ನಿ ತಿಳಿಯೋಣ.

ಸುಳ್ಳು ಸುದ್ದಿಯನ್ನು ನಂಬಬೇಡಿ!
ದ್ವಿತೀಯ ಪಿಯುಸಿ ಫಲಿತಾಂಶ ನೋಡಲು ಲಕ್ಷ ಲಕ್ಷ ವಿದ್ಯಾರ್ಥಿಗಳು ಕಾಯುತ್ತಿದ್ದಾರೆ. ಈ ಹಿನ್ನೆಲೆ ಆದಷ್ಟು ಬೇಗ ರಿಸಲ್ಟ್ ನೀಡಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕೂಡ ಪ್ರಯತ್ನ ಮಾಡುತ್ತಿದೆ. ಆದರೆ ಇದೀಗ ಈ ಬಗ್ಗೆ ಸುಳ್ಳು ಸುದ್ದಿ ಹಬ್ಬಿದ್ದು, ಶೀಘ್ರದಲ್ಲೇ ದ್ವಿತೀಯ ಪಿಯುಸಿ ಫಲಿತಾಂಶದ ಬಗ್ಗೆ ಅಧಿಕೃತ ಹೇಳಿಕೆ ಹೊರಬೀಳುವ ನಿರೀಕ್ಷೆ ಇದೆ. ಹೀಗಾಗಿ ಈಗ ಹಬ್ಬಿರುವ ಸುಳ್ಳು ಸುದ್ದಿಯನ್ನು ನಂಬಬೇಡಿ ಎಂದು, ಈಗ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಖಡಕ್ ಸೂಚನೆ ನೀಡಿದೆ.

ಶೀಘ್ರದಲ್ಲೇ ಹೊರಬೀಳಲಿದೆ ಫಲಿತಾಂಶ
ಶೈಕ್ಷಣಿಕ ಗುಣಮಟ್ಟದ ವಿಚಾರದಲ್ಲಿ ಕರ್ನಾಟಕ ಇಡೀ ದೇಶದಲ್ಲೇ ದೊಡ್ಡ ಹೆಸರು ಪಡೆದು ಗಮನ ಸೆಳೆಯುತ್ತಿದೆ. ಹೀಗಾಗಿ ಕರ್ನಾಟಕದ ಪಿಯುಸಿ ಫಲಿತಾಂಶ ಇಡೀ ದೇಶದ ಗಮನವನ್ನ ಸೆಳೆದಿದೆ. ಯಾಕಂದ್ರೆ ಕರ್ನಾಟಕದಲ್ಲಿ ಅದರಲ್ಲೂ ನಮ್ಮ ಬೆಂಗಳೂರಿನಲ್ಲಿ ಬೇರೆ ಬೇರೆ ರಾಜ್ಯದ ವಿದ್ಯಾರ್ಥಿಗಳು ಕೂಡ ಓದುತ್ತಿದ್ದಾರೆ. ಇದೀಗ 2023 & 2024ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂಬ ಸುಳ್ಳು ಸುದ್ದಿ ದೇಶಾದ್ಯಂತ ಸದ್ದು ಮಾಡಿದೆ. ಹೀಗಾಗಿ ಇದೀಗ ಅಧಿಕೃತವಾಗಿ ಮಾಹಿತಿ ಹೊರಬಿದ್ದಿದ್ದು, ಈ ಸುದ್ದಿ ಸುಳ್ಳು ಎಂದು ತಿಳಿಸಲಾಗಿದೆ.

Leave a Reply