ವಿಜಯಪುರ: ಚುನಾವಣಾ ಕರ್ತವ್ಯ ನಿರತ ಕೊಲ್ಹಾರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೆಬಲ್ ಆರೋಗ್ಯದಲ್ಲಿ ಏರುಪೇರಾಗಿ ಚಿಕಿತ್ಸೆ ಫಲಿಸದೇ ವಿಜಯಪುರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ಸಾವಿಗೀಡಾಗಿದ್ದಾರೆ.
ಕೊಲ್ಹಾರ ಠಾಣೆಯ ಇಬ್ರಾಹಿಂಸಾಬ್ ಅವಟಿ (44) ಸಾವಿಗೀಡಾದ ಹೆಡ್ ಕಾನ್ಸ್ಪೆಬಲ್. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೊಲ್ಹಾರ ಠಾಣೆ ವ್ಯಾಪ್ತಿಯಲ್ಲಿ ಫ್ಲಾಯಿಂಗ್ ಸ್ಕ್ವಾಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಈ ವೇಳೆ ಏಕಾಏಕಿಯಾಗಿ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ತಕ್ಷಣವೇ ಅವರನ್ನು ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ.