ಸುಬ್ರಹ್ಮಣ್ಯ : ಸಿಡಿಲು ಬಡಿದು ನವವಿವಾಹಿತ ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿಮೇ.3 ರ ಸಂಜೆ ನಡೆದಿದೆ. ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮಸುಂದರ್(34) ಮೃತ ಪಟ್ಟವರು. 10 ದಿನಗಳ ಹಿಂದೆಯಷ್ಟೇ ಅವರ ವಿವಾಹ ನಡೆದಿತ್ತು. ಇವರು ಪರ್ವತ ಮುಖಿ ಸಮೀಪ ದೇವಿಕಾ ಕಾರ್ ವಾಷಿಂಗ್ ನ ಸರ್ವಿಸ್ ಸೆಂಟರ್ ನಡೆಸುತ್ತಿದ್ದರು. ಸಂಜೆ ಸುಬ್ರಹ್ಮಣ್ಯ ಪರಿಸರದಲ್ಲಿ ಮಳೆ ಸುರಿದಿದ್ದೆ. ಅದಕ್ಕೂ ತುಸು ಮೊದಲು ಮನೆಯಂಗಲದಲ್ಲಿ ಒಣಗಲು ಹಾಕಿದ್ದ ಅಡಿಕೆಯನ್ನು ಸೋಮಸುಂದರ್ ರಾಶಿ ಮಾಡುತ್ತಿದ್ದ ವೇಳೆ ಅವರಿಗೆ ಸಿಡಿಲು ಬಡಿದಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ ಆ ವೇಳೆಗಾಗಲೇ ಅವರು ಮೃತರಾಗಿದ್ದಾರೆ. ಮೃತರು ತಾಯಿ, ತಂಗಿ, ಪತ್ನಿಯನ್ನು ಅಗಲಿದ್ದಾರೆ. ಎರಡು ವರ್ಷಗಳ ಹಿಂದೆ ಸುರಿದ ಭಾರೀ ಮಳೆಗೆ ಗುಡ್ಡ ಕುಸಿದು ಇಬ್ಬರು ಮಕ್ಕಳು ಮೃತಪಟ್ಟಿದ್ದರು.