ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ಹಗರಣದ ತನಿಖೆ ಸಿಐಡಿಗೆ – ಸರಕಾರದ ಆದೇಶ

ಕಾರ್ಕಳ: ಜಿಲ್ಲೆಯ ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನಲ್ಲಿರುವ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯಲ್ಲಿ ನಡೆದಿದೆ ಎನ್ನಲಾದ ಕಳಪೆ ಕಾಮಗಾರಿ ಹಾಗೂ ಭ್ರಷ್ಟಾಚಾರದ ತನಿಖೆಗೆ ಸರಕಾರ ಸಿಐಡಿ ತನಿಖೆಗೆ ಆದೇಶಿಸಿದೆ.

ಎರ್ಲಪಾಡಿ ಗ್ರಾಮದ ಬೈಲೂರಿ ನಲ್ಲಿರುವ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯಲ್ಲಿ ಭ್ರಷ್ಟಾಚಾರ ಹಾಗೂ ಕಳಪೆ ಕಾಮಗಾರಿ ನಡೆದಿರುವುದಾಗಿ ಹಾಗೂ ಜನರ ಧಾರ್ಮಿಕ ಭಾವನೆಗಳಿಗೆ ಅಪಚಾರವಾಗುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಬಂದಿದ್ದವು. ಈ ವಿಷಯದ ಕುರಿತು ಸತ್ಯಾಸತ್ಯತೆಯನ್ನು ಪರಿಶೀಲಿಸಲು ಸಿಐಡಿ ಅಥವಾ ಉನ್ನತ ಮಟ್ಟ ತನಿಖಾ ಸಂಸ್ಥೆಗೆ ವಹಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿತ್ತು.

ಅದರಂತೆ ಮಹಾ ನಿರ್ದೇಶಕರ ಹಾಗೂ ಆರಕ್ಷಕ ಮಹಾ ನಿರೀಕ್ಷಕರ ಕೋರಿಕೆಯ ಹಿನ್ನೆಲೆಯಲ್ಲಿ ಕಳಪೆ ಕಾಮಗಾರಿ ಹಾಗೂ ಭ್ರಷ್ಟಾಚಾರದ ಕುರಿತಾದ ಪ್ರಕರಣದ ತನಿಖೆ ಯನ್ನು ಸಿಐಡಿಗೆ ವಹಿಸಿ ಸರಕಾರ ಆದೇಶಹೊರಡಿಸಿದೆ.ಪ್ರಕರಣದ ವಿಚಾರಣೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ವಿಚಾರಣಾ ವರದಿಯನ್ನು ಸರಕಾರಕ್ಕೆ ಸಲ್ಲಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

Leave a Reply