ಕಾರ್ಕಳ : ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ – ಇಬ್ಬರು ಮಹಿಳೆಯರಿಗೆ ಗಾಯ

ಕಾರ್ಕಳ : ಸುಡುಮದ್ದು ತಯಾರಿಕಾ ಘಟಕ ಸಿಡಿದು ಇಬ್ಬರು ಮಹಿಳೆಯರಿಗೆ ಗಾಯಗಳಾದ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಾಜೆ ಎಂಬಲ್ಲಿ ಸಂಭವಿಸಿದೆ.

ಕಾರ್ಕಳ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಜೆ ಎಂಬಲ್ಲಿ ಕೆಲವಾರು ವರ್ಷಗಳಿಂದ ಸುಡುಮದ್ದು ತಯಾರಿಕಾ ಘಟಕ ಕಾರ್ಯಾಚರಿಸುತ್ತಿದ್ದು, ಎಂದಿನಂತೆ ಇಂದು ಬೆಳಗ್ಗೆ ಸುಡುಮದ್ದು ತಯಾರಿಕೆ ಸಂದರ್ಭದಲ್ಲಿ ಅನಿರೀಕ್ಷಿತವಾಗಿ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ. ಈ ವೇಳೆ ಕೆಲಸ ನಿರ್ವಹಿಸುತ್ತಿದ್ದ ಮಹಿಳೆಯರಿಬ್ಬರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

ಸುಡುಮದ್ದು ತಯಾರಿಕಾ ಘಟಕದಲ್ಲಿ 3 ಬೇರೆ ಬೇರೆ ಕಟ್ಟಡಗಳಿದ್ದು, ಒಂದು ಕಟ್ಟಡ ಸ್ಫೋಟಕ್ಕೆ ತುತ್ತಾಗಿದೆ. ಸ್ಫೋಟದ ಸಂದರ್ಭ ಒಳಗೆ ಕೆಲಸ ನಿರ್ವಹಿಸುತ್ತಿರುವ ಮಹಿಳೆಯರು ಗಾಯಗೊಂಡಿದ್ದರೆ, ಕಟ್ಟಡದ ಮೇಲ್ಛಾವಣಿ ಹೊತ್ತಿ ಉರಿದಿದ್ದು ಕಟ್ಟಡಕ್ಕೆ ಸಂಪೂರ್ಣ ಹಾನಿ ಆಗಿದೆ. ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ.

Leave a Reply