ಬೆಂಗಳೂರು : ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಸೂರಜ್ ರೇವಣ್ಣ ಅವರಿಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.
ಹೌದು ಪ್ರಕರಣ ಸಂಬಂಧಿಸಿದಂತೆ ಈಗಾಗಲೇ ಸಲಿಂಗ ಕಾಮ ಕೇಸ್ನಲ್ಲಿ ಹೆಚ್.ಡಿ.ರೇವಣ್ಣ ಪುತ್ರ, ಜೆಡಿಎಸ್ ಎಂಎಲ್ಸಿ ಸೂರಜ್ ರೇವಣ್ಣ ಜೈಲು ಸೇರಿದ್ದಾರೆ.
ಇದೀಗ ಪ್ರಕರಣ ಸಂಬಂಧ ಬೆಂಗಳೂರಿನ 42ನೇ ಎಸಿ ಎಮ್ ಎಂ ನ್ಯಾಯಾಲಯ ವಿಚಾರಣೆ ನಡೆಸಿ ಜುಲೈ 18ರ ವರೆಗೆ ಸೂರಜ್ ರೇವಣ್ಣ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಎಂದು ಆದೇಶ ಹೊರಡಿಸಿದೆ.