ಪುತ್ತೂರು : ಇಲ್ಲಿನ ಆರ್ಯಾಪು ಗ್ರಾಮದ ವಳತ್ತಡ್ಕ ಕೊಪ್ಪಳ ಎಂಬಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಜುಲೈ 4ರಂದು ನಡೆದಿದೆ.
ಕೊಪ್ಪಳ ನಿವಾಸಿ ಇಬ್ರಾಹಿಮ್ ಎಂಬವರ ಮಗ ಸಿದ್ದೀಕ್ ಅನ್ಸಾರ್ ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತ ದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಮೃತರು ತಂದೆ, ತಾಯಿ, ಪತ್ನಿ ಹಾಗೂ ಇಬ್ಬರು ಪುಟ್ಟ ಮಕ್ಕಳನ್ನು ಅಗಲಿದ್ದಾರೆ.