ಬೆಳ್ಳಂಬೆಳಗ್ಗೆ ಗುಂಡಿನ ಸದ್ದು : ಆರೋಪಿ ಕಾಲಿಗೆ ಪೊಲೀಸರ ಗುಂಡೇಟು

 ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿಸಿದ್ದು, ಕೊಲೆ ಯತ್ನ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ನಡೆದಿದೆ.

ಇಂದು ಬೆಳಗ್ಗೆ ಶಿವಮೊಗ್ಗ ಬಿ ಉಪ ವಿಭಾಗದ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಬಂಧಿಸಲು ಹೋದ ವೇಳೆ ಆರೋಪಿ ರಜಾಕ್‌ ಚಾಕುವಿನಿಂದ ಹಲ್ಲೆ ನಡೆಸಲು ಮುಂದಾಗಿದ್ದಾನೆ ಈ ವೇಳೆ ಪೊಲೀಸರು ಆರೋಪಿ ರಜಾಕ್‌ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

 

ಶಿವಮೊಗ್ಗದ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ರಜಾಕ್‌ ವಿರುದ್ಧ ಪ್ರಕರಣ ದಾಖಲಾಗಿತ್ತು. ಹೀಗಾಗಿ ಬಂಧಿಸಲು ಹೋದ ವೇಳೆ ಪೊಲೀಸ್‌ ಸಿಬ್ಬಂದಿ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಾನೆ. ಹೀಗಾಗಿ ಪೊಲೀಸರು ಆರೋಪಿ ಕಾಲಿಗೆ ಗುಂಡು ಹಾರಿಸಿದ್ದು, ಸದ್ಯ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ಆರೋಪಿಯನ್ನು ದಾಖಲಿಸಲಾಗಿದೆ.

Leave a Reply